ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ನಿವೃತ್ತಿ ಘೋಷಣೆ.!   ➤ ವೆಂಕಟಾಚಲಪತಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿತ್ತು. ಈ ಬೆನ್ನಲ್ಲೇ ಸಿಪಿಐಎಂಗೆ ಬೆಂಬಲ ಘೋಷಿಸಿ, ಕೆಆರ್ ಪುರಂ ಜೆಡಿಎಸ್ ಅಭ್ಯರ್ಥಿ ಚುನಾವಣಾ ನಿವೃತ್ತಿಯನ್ನು ಘೋಷಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ಅವರು, ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಲು ತೀರ್ಮಾನವಾಗಿರುತ್ತದೆ. ಅದರಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ವೆಂಕಟಾಚಲಪತಿಯವರು ಸಿಪಿಐ(ಎಂ) ಪಕ್ಷದ ಅಭ್ಯರ್ಥಿಯಾದ ನಂಜೇಗೌಡ ಅವರಿಗೆ ಬೆಂಬಲ ವ್ಯಕ್ತ ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

 

 

 

Scroll to Top