ಬಿಸಿಲಿಗೆ ಅಸ್ವಸ್ಥಗೊಂಡು ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಳ್ಳಾರಿ, ಏ.29. ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣಾ ವಿಭಾಗದ ಡಿ ಗ್ರೂ‍ಪ್‌ ಸಿಬ್ಬಂದಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಸಿರುಗುಪ್ಪದ ನಿವಾಸಿ ರತ್ನ(31) ಪ್ರತಿನಿತ್ಯ ಬಳ್ಳಾರಿಗೆ ಬಂದು ಹೋಗುತ್ತಿದ್ದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದಲ್ಲಿ ಏರ್ಪಡಿಸಿದ್ದ ಜಾಥಾದಲ್ಲಿ ಭಾಗವಹಿಸಿದ್ದರು. ಜಾಥಾದಿಂದ ಹಿಂತಿರುಗಿದ ಬಳಿಕ ಅವರಿಗೆ ಅಪಸ್ಮಾರ ಕಾಣಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Also Read  ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

 

error: Content is protected !!
Scroll to Top