ಬಹು ಮಹಡಿ ಕಟ್ಟಡ ಕುಸಿತ ಪರಿಣಾಮ ಅವಶೇಷಗಳಡಿ ಜನ ಸಿಲುಕಿರುವ ಶಂಕೆ..!

(ನ್ಯೂಸ್ ಕಡಬ)Newskadaba.com ಮಹಾರಾಷ್ಟ್ರ,ಏ.29 ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ವಾಲ್ಪಾಡಾ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಿಸಲಾಗುತ್ತಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 15 ರಿಂದ 20 ಜನರು ಸಿಲುಕಿರುವ ಶಂಕೆ ಇದ್ದು, ಸ್ಥಳೀಯರು ಅಗ್ನಿಶಾಮಕ ಮತ್ತು ವಿಪತ್ತು ಇಲಾಖೆಗೆ ಕರೆ ಮಾಡಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.ಸ್ಥಳೀಯರ ಪ್ರಕಾರ, 15 ರಿಂದ 20 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಗ್ರೌಂಡ್ ಪ್ಲಸ್ 2 ಅಂತಸ್ತಿನ ಕಟ್ಟಡ ಎಂದು ಹೇಳಲಾಗುತ್ತಿದೆ.

Also Read  ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

 

 

error: Content is protected !!
Scroll to Top