ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌

(ನ್ಯೂಸ್ ಕಡಬ) newskadaba.com. ಹೈದರಾಬಾದ್, ಮೇ.1. ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಅವರು ಇನ್ಸ್ಟಾಗ್ರಾಮ್‌ ಲೈವ್‌ ಬಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ ಯಲ್ಲಿ ಕೊರಿಯೊಗ್ರಾಫ‌ರ್ ಆಗಿ ಫೇಮ್‌ – ನೇಮ್‌ ಪಡೆದುಕೊಂಡಿದ್ದ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ತಮ್ಮ ಕಷ್ಟದ ಬಗ್ಗೆ ಮಾತನಾಡಿದ್ದು, ನನ್ನ ಅಪ್ಪ, ಅಮ್ಮ, ಸಹೋದರಿ ನನಗೆ ಯಾವುದೇ ಕಷ್ಟಬಾರದಾಗೆ ನೋಡಿಕೊಂಡಿದ್ದಾರೆ. ನಾನು ನನ್ನೆಲ್ಲ ಸ್ನೇಹಿತರಲ್ಲಿ ಕ್ಷಮೆ ಕೋರುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ ಮತ್ತು ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದಲ್ಲ, ಅದನ್ನು ಮರುಪಾವತಿ ಮಾಡುವ ಸಾಮರ್ಥ್ಯ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ನಾನೀಗ ನಲ್ಲೂರಿನಲ್ಲಿದ್ದೇನೆ. ಇದು ನನ್ನ ಕೊನೆಯ ದಿನ. ಇನ್ನು ನಾನು ನನ್ನ ಸಾಲಗಳಿಂದ ಬರುವ ಸಮಸ್ಯೆಗಳನ್ನು ಎದುರಿಸಲು ಆಗುವುದಿಲ್ಲ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Also Read  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

error: Content is protected !!
Scroll to Top