ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಡಬ, ಮೇ.1.  ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಪಿಕಪ್‌ ವಾಹನವೊಂದು ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ರಾಮಕುಂಜ ಬಳಿ ಮುಖ್ಯರಸ್ತೆಯಲ್ಲಿರುವ ಆತೂರು ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಪರಾರಿಯಾದ ಪಿಕಪ್ ವಾಹನದಲ್ಲಿ ದನದ ಮಾಂಸ ಸಾಗಿಸಲಾಗುತ್ತಿತ್ತು ಎಂದು ಸ್ಥಳೀಯರು ಆರೋಪವನ್ನು ಮಾಡಿದ್ದಾರೆ.

ಪಿಕಪ್ ವಾಹನ ಅತೀ ವೇಗವಾಗಿ ಚೆಕ್‌ಪೋಸ್ಟ್‌ನತ್ತ ನುಗ್ಗಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬಂದಿ ಗಾಬರಿಗೊಂಡು ಪಕ್ಕಕ್ಕೆ ಹಾರಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಪರಾರಿಯಾದ ವಾಹನವನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೆನ್ನಟ್ಟಿದಾಗ ಚಾಲಕ ವಾಹನವನ್ನು ಗೋಳಿತ್ತಡಿ ಸಮೀಪದ ಶಾರದಾ ನಗರದಲ್ಲಿ ಬಿಟ್ಟು ಪರಾರಿಯಾಗಿದ್ದ ಎಂದು ಹೇಳಲಾಗಿದೆ. ವಾಹನದಲ್ಲಿದ್ದ ದನದ ಮಾಂಸವನ್ನು ದಾರಿಮಧ್ಯೆ ಬೇರೆಡೆಗೆ ಸಾಗಿಸಲಾಗಿದೆ ಎಂಬ ಆರೋಪವೂ ಕೂಡಾ ವ್ಯಕ್ತವಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಆರೋಪಿ ಚಾಲಕ ಕೊಯಿಲ ಜನತಾ ಕಾಲನಿ ನಿವಾಸಿ ಬಶೀರ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಜೂ. 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅಸ್ತು ➤ ಕೋಟ ಶ್ರೀನಿವಾಸ ಪೂಜಾರಿ

ಪೊಲೀಸರ ವಶದಲ್ಲಿರುವ ಪಿಕಪ್ ವಾಹನ ದಿನನಿತ್ಯ ಗೋಮಾಂಸ ಹಾಗೂ ಅಕ್ರಮ ಗೋಸಾಗಾಟ ನಡೆಸುತ್ತಿರುವ ವಾಹನ ಎನ್ನಲಾಗಿದ್ದು, ಕೊಯಿಲ ಪರಿಸರದಲ್ಲಿ ನಿರಂತರ ಅಕ್ರಮ ಗೋ ವಧೆ ನಡೆಯುತ್ತಿದ್ದು, ಅಲ್ಲಿಂದಲೇ ವಾಹನಗಳಲ್ಲಿ ಇತರೆಡೆಗೆ ಮಾಂಸ ಸಾಗಾಟವಾಗುತ್ತಿದೆ ಎಂದು ಆರೋಪಿಸಲಾಗಿದೆ. ವಿಶೇಷವೆಂದರೆ ದಿನಾ ಬೆಳ್ಳಂಬೆಳಗ್ಗೆ ವಾಹನಗಳಲ್ಲಿ ಚೆಕ್‌ ಪೋಸ್ಟ್‌ ಮೂಲಕವೇ ಹಾದು ಗೋ ಮಾಂಸ ಸಾಗಿಸಲಾಗುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಕೂಡಾ ಸ್ಥಳೀಯರು ಆಗ್ರಹಿಸಿದ್ದಾರೆ.

error: Content is protected !!
Scroll to Top