(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.1. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಜೋರು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಏಪ್ರಿಲ್ 3 ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಣನೀಯವಾಗಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿಂದು ಸಂಜೆಯ ವೇಳೆ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು 30 ರಿಂದ 40 ಕಿ.ಮೀ ಇರಲಿದೆ. ಮೂರು ದಿನ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.