(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕೆಲಸದ ಅವಧಿ 12 ಗಂಟೆಗಳಿಗೆ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅನುಮತಿ ನೀಡಿರುವ ಸರ್ಕಾರದ ನಡೆಯನ್ನು ವಿರೋಧಿಸುವ ಮೂಲಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆ.ಸಿ.ಟಿ.ಯು) ಕಾರ್ಮಿಕ ದಿನ ಆಚರಿಸಿತು.
ನಗರದ ಸ್ವಾತಂತ್ರ್ಯ ಉದ್ಯಾನದ ಕೆ. ಸುಬ್ಬರಾವ್ ವೇದಿಕೆಯಲ್ಲಿ ನಡೆದ ಮೇ ದಿನಾಚರಣೆಯ ಸಾರ್ವಜನಿಕ ಸಭೆಯಲ್ಲಿ ಸಾವಿರಾರು ಕಾರ್ಮಿಕರು ಕೆಂಪು ಬಟ್ಟೆ ಧರಿಸಿ ಪಾಲ್ಗೊಂಡಿದ್ದರು. ಈ ಬಾರಿ ಮೇ ದಿನದ ಘೋಷ ವ್ಯಾಕ್ಯ ‘ಕೆಲಸದ ಅವಧಿಯನ್ನು 8 ಗಂಟೆಗೆ ಸೀಮಿತಗೊಳಿಸಿ, ಜೀವನಯೋಗ್ಯ ಕನಿಷ್ಠ ವೇತನ ಜಾರಿಗೊಳಿಸಬೇಕು’ ಎನ್ನುವುದಾಗಿತ್ತು. ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಲಾಯಿತು.