ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್ 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ.

ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.ಬಿಎಪಿಲ್ ಕಟುಂಬಕ್ಕೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ವಿದ್ಯುತ್ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.ನೀಡಲಾಗುವುದು, ಯುವನಿಧಿ, ನಿರುದ್ಯೋಗ ಭತ್ಯೆ, ಪದವೀಧರರಿಗೆ 3,000 ರೂ. ಡಿಪ್ಲೋಮಾ ಪಡೆದವರಿಗೆ 1,500 ರೂ. ನೀಡುವುದಾಗಿ ಹೇಳಿದ್ದಾರೆ..

Also Read  ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC

 

error: Content is protected !!
Scroll to Top