‘ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ’.!   ➤ ಕಾಂಗ್ರೇಸ್ ಗೆ ಸೆಡ್ಡು ಹೊಡೆದ ಶೋಭಾ ಕರಂದ್ಲಾಜೆ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೊರ ತಂದಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಭರವಸೆ ನೀಡಿರುವುದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾ ಮಂಡಲವಾಗಿದ್ದಾರೆ. ಈ ಭರವಸೆ ಓದಿ ನನ್ನ ರಕ್ತ ಕುದಿಯುತ್ತಿದೆ. ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಸೆಡ್ಡು ಹೊಡೆದರು.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದೇಶದ್ರೋಹಿ ಪಿಎಫ್ ಐ ಸಂಘಟನೆಯನ್ನು ದೇಶಭಕ್ತ ಬಜರಂಗದಳಕ್ಕೆ ಹೋಲಿಸಿರುವುದು ಸರಿಯಲ್ಲ. ಉಗ್ರ ಕೃತ್ಯ ಎಸಗುವವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸೋದರರಾಗಿದ್ದು, ದೇಶದ ಹಿಂದು ಯುವಜನರಲ್ಲಿ ಜಾಗೃತಿ ಕೆಲಸ ಮಾಡುತ್ತಿರುಚ ಬಜರಂಗದಳ ವಿರೋಧಿ ಎನಿಸಿದೆ ಎಂದು ಚಾಟಿ ಬೀಸಿದರು.

Also Read  ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..?

 

 

error: Content is protected !!
Scroll to Top