ಮೇ.03 ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ..! ➤ವಧೂ-ವರರಿಗೆ ನಟ ದರ್ಶನ್ ತೂಗುದೀಪ ಮಂಗಲಸೂತ್ರ ವಿತರಿಸಲಿದ್ದಾರೆ!!

(ನ್ಯೂಸ್ ಕಡಬ)Newskadaba.com ಬೆಳ್ತಂಗಡಿ,ಮೇ.02 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ.

ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು.

Also Read  ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ

ದರ್ಶನ್‌ ಭಾಗಿಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಕನ್ನಡ ಚಲನಚಿತ್ರ ನಟ ದರ್ಶನ್‌ ತೂಗುದೀಪ ಅವರು ವಧೂ-ವರರಿಗೆ ಮಂಗಲಸೂತ್ರ ವಿತರಿಸುವರು. ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ಸಂಭ್ರಮದಿಂದ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ವಿವಾಹ ಭೋಜನ ಇರಲಿದೆ.

 

 

 

error: Content is protected !!
Scroll to Top