ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಡೆತ್‌ನೋಟ್‌ ಬರೆದಿಟ್ಟು ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಟನ್‌ ಪೇಟೆಯಲ್ಲಿರುವ ಪೊಲೀಸ್‌ ಕ್ವಾಟ್ರರ್ಸ್‌ನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಳ್ಳಾರಿ ಮೂಲದ ಆಯಿಷಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಆಕೆಯ ಬಳಿ ಎರಡು ಪುಟದ ಡೆತ್‌ನೋಟ್‌ ಪತ್ತೆಯಾ ಗಿದ್ದು, ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Scroll to Top