(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ3. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಾಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ, ಶೇ.50ರಷ್ಟಿರುವ ಮೀಸಲಾತಿ ಮಿತಿಯನ್ನು 75ಕ್ಕೆ ಹೆಚ್ಚಿಸುವ ಭರವಸೆಯನ್ನು ನೀಡಿದೆ. ಆದರೆ, ಈ ಭರವಸೆಗೆ ಕಾನೂನು ತೊಡಕುಗಳು ಎದುರಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
ರಾಜ್ಯ ಬಿಜೆಪಿ ಹಿಂದುಳಿದ ವರ್ಗ (ಬಿಸಿ) ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದು, ಈ ಮೀಸಲಾತಿ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮಂಗಳವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಎಸ್‌ಸಿಗಳ ಮೀಸಲಾತಿಯನ್ನು ಶೇಕಡಾ 15 ರಿಂದ 17 ಕ್ಕೆ ಮತ್ತು ಎಸ್‌ಟಿಗಳ ಮೀಸಲಾತಿಯನ್ನು ಶೇಕಡಾ 3 ರಿಂದ ಶೇಕಡಾ 7 ಕ್ಕೆ ಹೆಚ್ಚಿಸುವುದಾಗಿ ಪ್ರಸ್ತಾಪಿಸಿದೆ. ಅಲ್ಲದೆ, ಲಿಂಗಾಯತರು ಮತ್ತು ಒಕ್ಕಲಿಗರು ಮತ್ತು ಇತರ ಸಮುದಾಯಗಳಿಗೆ ಮೀಸಲಾತಿಯನ್ನು ಶೇ.50 ರಿಂದ 75ಕ್ಕೆ ಏರಿಸುವುದಾಗಿ ಹೇಳಿದೆ.