ಬಂಡಾಯ ಅಭ್ಯರ್ಥಿಗಳಿಗೆ ಬಿಗ್ ಶಾಕ್ ➤ ಕಾಂಗ್ರೆಸ್ ಪಕ್ಷದಿಂದ 24 ಅಭ್ಯರ್ಥಿಗಳು ಉಚ್ಚಾಟನೆ ..!​

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03 ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅನೇಕ ಅಭ್ಯರ್ಥಿಗಳು ಬಂಡಾಯವೆದ್ದಿದ್ದರು. ಪಕ್ಷದ ವಿರುದ್ಧ ತೊಡೆ ತಟ್ಟಿ, ಬಂಡಾಯ ಅಭ್ಯರ್ಥಿಗಳಾಗಿ ಕೆಲವೆಡೆ ಸ್ಪರ್ಧಿಸಿದ್ದರು.ಅಂತವರಿಗೆ ಇಂದು ಕಾಂಗ್ರೆಸ್ ಪಕ್ಷದಿಂದ ಗೇಟ್ ಪಾಸ್ ನೀಡಿ, ಬಿಗ್ ಶಾಕ್ ನೀಡಲಾಗಿದೆ.

ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಕೆ.ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿರುವ 24 ಮಂದಿಯನ್ನು ಪಕ್ಷದ ಪ್ರಾಧಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  'ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ'- ದೇಶಪಾಂಡೆ

 

 

 

 

 

 

error: Content is protected !!
Scroll to Top