ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡುತ್ತಿದ್ದ ವೇಳೆ ಅರ್ಧಕ್ಕೆ ಎದ್ದು ಹೋದ BSY..!​

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03 ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣಕ್ಕಿಳಿದಿರುವ ಕನಕಪುರ ಕ್ಷೇತ್ರದತ್ತ ಹೆಚ್ಚಿನ ಚಿತ್ತ ನೆಟ್ಟಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.ವರುಣಾದ ಹೊಸಕೋಟೆಯಲ್ಲಿ ಬಹಿರಂಗ ಸಮಾವೇಶ ನಡೆದಿದ್ದು, ಅಮಿತ್ ಶಾ ಮಾತನಾಡುವಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ಇಳಿದು ಹೊರ ನಡೆದಿರುವ ಘಟನೆ ನಡೆದಿದೆ.

Also Read  ರಾಜ್ಯದಲ್ಲಿ ಮುಂದಿನ ತಿಂಗಳು ಪಿಯು,ಡಿಗ್ರಿ ಕಾಲೇಜು ಓಪನ್.!

ಸೋಮಣ್ಣ ಹಾಗೂ ಯಡಿಯೂರಪ್ಪ ನಡುವೆ ಶೀತಲ ಸಮರ ನಡೆಯುತ್ತಿದೆ ಎನ್ನುವ ವದಂತಿಗಳ ನಡುವೆ ಈ ಬೆಳವಣಿಗೆ ನಡೆದಿದೆ. ಅಷ್ಟೇ ಅಲ್ಲ, ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯನವರ ಹೆಸರನ್ನು ಪ್ರಸ್ತಾಪಿಸದೆ ಇರುವುದು ಸಹ ಕುತೂಹಲಕ್ಕೆ ಕಾರಣವಾಗಿದೆ.

 

 

error: Content is protected !!
Scroll to Top