ಮೇ 6ರಂದು ಚಿತ್ತಾಪುರದಲ್ಲಿ ಅಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆ ರದ್ದು.!​

(ನ್ಯೂಸ್ ಕಡಬ)Newskadaba.comಲಬುರಗಿ,ಮೇ..03ಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ‌ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.ಈ ಕುರಿತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೌಡಿಶೀಟರ್ ಆಗಿರುವ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಮಣಿಕಂಠ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಪ್ರಧಾನಿ ಅವರನ್ನು ಕರೆಸಿದರೆ ಪಕ್ಷಕ್ಕೆ ಮುಜುಗರವಾಗಬಹುದು ಎಂಬ ಆತಂಕದಿಂದ ಸಭೆಯನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read  ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ...!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

 

 

error: Content is protected !!
Scroll to Top