(ನ್ಯೂಸ್ ಕಡಬ)Newskadaba.com ದೆಹಲಿ,ಮೇ..03 ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ.
ಶಕ್ತಿಯುತ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ, ವಿಶೇಷವಾಗಿ ದೀರ್ಘಕಾಲ ಆ ಸ್ಥಾನದಲ್ಲಿದ್ದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ನಿಲ್ಲುವುದು ತುಂಬಾ ಕಷ್ಟ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಹೇಳಿದ್ದಾರೆ.ದೆಹಲಿಯ ಜಂತರ್ ಮಂತರ್ ನಲ್ಲಿ ಶರಣ್ ಸಿಂಗ್ ವಿರುದ್ಧ ಕುಸ್ತಿಪಟು ಬ್ರಿಜ್ ಭೂಷಣ್ ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ವಿನೇಶ್ ಫೋಗಟ್, ಪ್ರತಿಭಟನೆ ಪ್ರಾರಂಭಿಸುವ ಮೊದಲು ನಾವು ಅಧಿಕಾರಿಯನ್ನು ಭೇಟಿ ಮಾಡಿದ್ದೇವೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ನಂತರ ನಾವು ಧರಣಿ ಕುಳಿತಿದ್ದೇವೆ ಎಂದು ಹೇಳಿದ್ದಾರೆ.