(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ..03 ಮೇ.6ರಂದು ಬಂಗಾಳಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಬಗ್ಗೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಒಂದು ವಾರದಿಂದ ಭೂಮೇಲ್ಮೈ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ.
ಇದೀಗ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ 6ರಂದು ಶನಿವಾರ ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ. ಈಗಾಗಲೇ ಆಗ್ನೇಯ ಭಾಗದಲ್ಲಿ ಗಾಳಿ ಸುತ್ತುವರಿಯುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ.ಬಂಗಾಳಕೊಲ್ಲಿಯಲ್ಲಿನ ವಾಯುಭಾರತ ಕುಸಿತ ಮೇ 6ರ ವರೆಗೆ ದಿನೇ ದಿನೆ ತೀವ್ರಗೊಳ್ಳುತ್ತಾ, ನಿಖರ ಚಂಡಮಾರುತವಾಗಿ ಹೊರ ಹೊಮ್ಮುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.