ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ..!‌ ➤ ಮೂಲ್ಕಿಯಲ್ಲಿ ಅಬ್ಬರಿಸಿದ ಮೋದಿ

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ..03 ಪ್ರಧಾನಿ ನರೇಂದ್ರ ಮೋದಿಯವರು ಕರಾವಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. “ಪರಶುರಾಮ ಕ್ಷೇತ್ರ ದ ಯೆನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಮೋಕೆದ ಸೊಲ್ಮೆಲ್” ಎಂದರು.

ಹಿಂದಿನ ಕಾಂಗ್ರೆಸ್‌ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ ಮೀನುಗಾರರ ಕುಟುಂಬಗಳಿವೆ ಎಂದು ಮೋದಿಗೆ ಗೊತ್ತಿತ್ತು. ಇದೇ ಕಾರಣಕ್ಕೆ ಮೀನುಗಾರರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದರು.ಕರ್ನಾಟಕದ ಮೀನುಗಾರರಿಗೆ ಕಾಂಗ್ರೆಸ್ ದ್ರೋಹ ಬಗೆದಿದೆ. ದೆಹಲಿಯಲ್ಲಿ ಕುಳಿತಿರುವ ಸರ್ಕಾರಕ್ಕೆ ಮೀನುಗಾರಿಕೆ ಅಸ್ತಿತ್ವದಲ್ಲಿದೆ ಎಂದು ತಿಳಿದಿರಲಿಲ್ಲ! ಮತ್ತು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ನಾವು ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ಸ್ಥಾಪಿಸಿದ್ದೇವೆ ಎಂದರು.

Also Read  ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ

 

 

error: Content is protected !!
Scroll to Top