ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ

(ನ್ಯೂಸ್ ಕಡಬ) newskadaba.com. ಚೆನ್ನೈ,ಮೇ.3. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಹಾಗೂ ನಿರ್ದೇಶಕ ಮನೋಬಾಲ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ನಟ ಮನೋಬಾಲ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಲಿವರ್​​ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

error: Content is protected !!
Scroll to Top