ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..04 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತದಾನದ ವೇಳೆ ಮಳೆಯಿಂದ ತೊಂದರೆಯಾಗುವ ಆತಂಕ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ವೇಗ, ಸಾಗುವ ದಿಕ್ಕು ಮತ್ತು ಪರಿಣಾಮಗಳ ಕುರಿತಾದ ನಿಖರ ಮಾಹಿತಿ ಸ್ಪಷ್ಟವಾಗುತ್ತಿತ್ತು. ಮೇ 6 ವೇಳೆಗೆ ಬಂಗಾಳಕೊಲ್ಲಿಯಲ್ಲಿ ಹಲವು ಬದಲಾವಣೆಗಳಾಗಲಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಚಂಡಮಾರುತದಿಂದ ಮಳೆ ಹೆಚ್ಚಾದಲ್ಲಿ ರಾಜ್ಯದಲ್ಲಿ ಚುನಾವಣೆ ಪ್ರಚಾರ, ಮತದಾನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

 

 

error: Content is protected !!

Join the Group

Join WhatsApp Group