ಬರ್ತ್‌ಡೇ ಪಾರ್ಟಿಯಲ್ಲಿ ಪ್ರಜ್ಞೆ ಕಳೆದುಕೊಂಡ 22 ವಿದ್ಯಾರ್ಥಿಗಳು..!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಮೇ.04 ಶಿಕ್ಷಕರೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡ 22 ವಿದ್ಯಾರ್ಥಿಗಳು ಪ್ರಜ್ಞೆ ಕಳೆದುಕೊಂಡ ಘಟನೆ ಸಂಭವಿಸಿದೆ.ದಕ್ಷಿಣ ದೆಹಲಿಯ ಮೆಹರೂಲಿ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಹುಟ್ಟುಹಬ್ಬದ ಕೂಟದಲ್ಲಿ ಈ ಘಟನೆ ಸಂಭವಿಸಿದ್ದು, ಅಸ್ವಸ್ಥ ಮಕ್ಕಳನ್ನು ಸಪ್ಧರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

“ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭಿಕ ತನಿಖೆಯಿಂದ ತಿಳಿದು ಬಂದಂತೆ ಸುಗಂಧ ದ್ರವ್ಯ ಎಂದು ತಪ್ಪಾಗಿ ‘ಪೆಪ್ಪರ್ ಸ್ಪ್ರೇ’ ಸಿಂಪಡಿಸಿದ್ದರಿಂದ ಮಕ್ಕಳು ಪ್ರಜ್ಞೆ ಕಳೆದುಕೊಂಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Also Read  ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ➤  ಉದ್ಯೋಗಿಗಳ 'ಪಿಂಚಣಿ ಹೆಚ್ಚಳ' ಕ್ಕೆ ಗ್ರೀನ್ ಸಿಗ್ನಲ್ !

 

error: Content is protected !!
Scroll to Top