ವಿಜುಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್‌ ಘೋಷಣೆ ➤ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿದ ಪುತ್ರ..!

(ನ್ಯೂಸ್ ಕಡಬ)Newskadaba.com ವಿಜಯಪುರ,ಮೇ.04 ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ವಿಜುಗೌಡ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆಯಾದ ಸಂದರ್ಭದಲ್ಲಿ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ, ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Also Read  ಮಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಪರಿಚಿತ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ

 

error: Content is protected !!
Scroll to Top