ನೀತಿ ಸಂಹಿತೆ ಉಲ್ಲಂಘನೆ..!➤FIR ದಾಖಲು..!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.04 ಅನುಮತಿ ಪಡೆಯದೇ ಚುನಾವಣಾ ಪ್ರಚಾರ ಸಭೆ ನಡೆಸಿ, ಊಟದ ವ್ಯವಸ್ಥೆ ಮಾಡಿದ ಆರೋಪದ ಮೇಲೆ ಇಬ್ಬರು ಸಂಸದರು, ಬಿಜೆಪಿಯ ಇಬ್ಬರು ಮುಖಂಡರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಸಂಸದೆ ಮಂಗಲಾ‌ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾಧಿಕಾರಿ ನಂದಗಡ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲ್ಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಲಿಂಗಾಯತ ಸಮಾಜದ 500ಕ್ಕೂ ಹೆಚ್ಷು ಮುಖಂಡರನ್ನು ಸೇರಿಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದರು. ಇದಕ್ಕೆ ಚುನಾವಣಾಧಿಕಾರಿಗಳಿಂದ‌ ಅನುಮತಿ ಪಡೆದಿರಲಿಲ್ಲ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Also Read  ಹಾಸನ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ ➤ 7 ಮಂದಿಗೆ ಗಾಯ

 

 

error: Content is protected !!
Scroll to Top