(ನ್ಯೂಸ್ ಕಡಬ) newskadaba.com. ಮುಂಬೈ, ಮೇ.5. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬ ತನ್ನ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನಿ ಏಜೆಂಟ್‍ಗೆ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದ್ದಾರೆ.
ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದು ಹನಿಟ್ರ್ಯಾಪ್ ಮೂಲಕ ಆರೋಪಿಯನ್ನು ಬೆದರಿಸಿ ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಈ ಎಲ್ಲಾ ಮಾಹಿತಿಗಳು ತನಿಖೆಯ ನಂತರ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಪಾಕಿಸ್ತಾನಿ ದೇಶಗಳಿಗೆ ತನ್ನ ಬಳಿಯಿರುವ ಎಲ್ಲಾ ರಹಸ್ಯ ಮಾಹಿತಿಗಳನ್ನು ನೀಡಿ ದೇಶದ ಭದ್ರತೆಗೆ ಅಪಾಯವನ್ನು ತರಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿಯ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.