ಮೇ.6 ರಂದು ಬೆಳಗಾವಿಗೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಆಗಮನ…!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.05 ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರು ನಾಳೆ ಮೇ 6ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರ ಅವರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ.

 

 

Scroll to Top