(ನ್ಯೂಸ್ ಕಡಬ) newskadaba.com.ವಿಜಯಪುರ , ಮೇ.6. ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಯಲ್ಲಿ ರೌಡಿಶೀಟರ್ ಸಾವನ್ನಪ್ಪಿದ್ದಾನೆ. ನಗರದ ಚಾಂದಪುರ ಕಾಲೋನಿಯಲ್ಲಿ ಘಟನೆ ನಡೆದಿದೆ.
ರೌಡಿಶೀಟರ್ ಹೈದರ್ ಅಲಿ ನದಾಫ್ಮೇ ಲೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹತ್ಯೆ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ. ಮೃತ ಹೈದರ್ ಅಲಿ ನಧಾಪ್ ಪತ್ನಿ ನಿಶಾತ್ ನದಾಫ್ ಅವರು ಪಾಲಿಕೆ ಸದಸ್ಯೆ ಆಗಿದ್ದಾರೆ. ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.