ಆಕಾಶ ಭವನ ಬಶೀರ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಇತ್ತೀಚೆಗೆ ನಗರದಲ್ಲಿ ನಡೆದ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬವರ ಕೊಲೆಯಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕಾಸರಗೋಡು ಮೊಗ್ರಾಲ್ ನಿವಾಸಿ ಗೋಪಾಲ್ ಎಂಬವರ ಪುತ್ರ ಲತೀಶ್(24), ಕಾಸರಗೋಡು ಸ್ಕೌಟ್ ಭವನ ವಿದ್ಯಾನಗರ ನಿವಾಸಿ ದಿ| ಉಮೇಶ್ ಆಚಾರ್ಯ ಎಂಬವರ ಪುತ್ರ ಪುಷ್ಪರಾಜ್(23) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಫಾಸ್ಟ್ ಪುಡ್ ವ್ಯಾಪಾರವನ್ನು ನಡೆಸುತ್ತಿದ್ದ ಅಬ್ದುಲ್ ಬಶೀರ್ ಎಂಬವರು ತನ್ನ ಫಾಸ್ಟ್ ಪುಡ್ ಹೊಟೇಲ್ ನ್ನು ಬಂದ್ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಅಬ್ದುಲ್ ಬಶೀರ್ ರವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

Also Read  ಸಸಿಗಳನ್ನು ನೆಡುವ ಕಾರ್ಯಕ್ರಮ

ಈ ಕೊಲೆ ಕೃತ್ಯದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳಾದ ಶ್ರೀಜಿತ್ ಪಿ.ಕೆ., ಕಿಶನ್ ಪೂಜಾರಿ, ಧನುಷ್ ಪೂಜಾರಿ, ಸಂದೇಶ್ ಕೋಟ್ಯಾನ್ ಎಂಬವರನ್ನು ಈಗಾಗಲೇ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

error: Content is protected !!
Scroll to Top