(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ, ಮೇ.6. ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಚೇಳು ಕಡಿದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಗಪುರದಿಂದ ಮುಂಬಯಿಗೆ ಕಳೆದ ತಿಂಗಳು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದೆ.
ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆಯೇ ಮಹಿಳೆಗೆ ವೈದ್ಯರೊಬ್ಬರಿಂದ ಚಿಕಿತ್ಸೆ ಕೊಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರು ಚೇತರಿಸಿಕೊಂಡಿದ್ದು ಬಿಡುಗಡೆ ಮಾಡಲಾಗಿದೆ ಎಂದು ಏರ್ ಇಂಡಿಯಾ ಸಂಸ್ಥೆ ಹೇಳಿಕೆ ನೀಡಿದೆ.