ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ➤ ಎಸ್ಡಿ ಪಿಐ ಕಾರ್ಯಕರ್ತನ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.08. ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ.


ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು ಎಂದು ವರದಿ ತಿಳಿಸಿದೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಚಾರದ ವಾಹನ ಎಸ್ ಡಿಪಿಐ ಅವರ ರ್ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು. ಈ ಸಂದರ್ಭ ಎಸ್ ಡಿಪಿಐ ಕಾರ್ಯಕರ್ತರ ಬೈಕ್ ಹಾಗೂ ರಿಕ್ಷಾ ರ್ಯಾಲಿಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಇದೇ ಸಂದರ್ಭ ಕಾಂಗ್ರೆಸ್ ಪರವಾದ ಹಾಡನ್ನು ಚುನಾವಣಾ ಪ್ರಚಾರ ವಾಹನದಲ್ಲಿ ಹಾಕಲಾಗಿತ್ತು ಎಂದು ತಿಳಿದುಬಂದಿದೆ.

Also Read  ➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

 

 

error: Content is protected !!
Scroll to Top