14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಮೃತ್ಯು..

 (ನ್ಯೂಸ್ ಕಡಬ) newskadaba.com.ಮೈಸೂರು, ಮೇ.8.  ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ದಾಖಲೆ ನಿರ್ಮಿಸಿದ್ದ 67 ವರ್ಷದ ಬಲರಾಮ ಆನೆ ಭಾನುವಾರ ಸಂಜೆ ಅನಾರೋಗ್ಯದಿಂದ ಸಾವನ್ನಪ್ಪಿದೆ.

ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹುಣಸೂರು ಅರಣ್ಯ ವ್ಯಾಪ್ತಿಯ ಹನಗೂಡು ಬಳಿಯ ಭೀಮನಕಟ್ಟೆ ಬಳಿಯ ಅರಣ್ಯ ಶಿಬಿರದಲ್ಲಿ ಆರೈಕೆ ಮಾಡಲಾಗುತ್ತಿತ್ತು, ಹಲವು ದಿನಗಳಿಂದ ಆಹಾರ ನೀರನ್ನು ಸೇವಿಸಿದರೂ ವಾಂತಿ ಮಾಡುತ್ತಿರುವುದಾಗಿ ಕಾವಾಡಿ ತಿಳಿಸಿದ ಮೇರೆಗೆ ಪಶುವೈದ್ಯಾಧಿಕಾರಿಗಳು ಬಲರಾಮನನ್ನು ಪರೀಶಿಲಿಸಿದಾಗ ಒಣಗಿದ ಮರದ ಚೂಪಾದ ಕವಟೆ ಸಿಕ್ಕಿದ್ದು, ಚಿಕಿತ್ಸೆಯನ್ನು ನೀಡಲಾಗಿತ್ತು,  ಚಿಕಿತ್ಸೆಯ ನಂತರವು ಸುಧಾರಿಸಿದ ಕಾರಣ ಎಂಡೋಸ್ಕೋಪಿಯನ್ನು ಮಾಡಿ ಮಾದರಿಯನ್ನು ಪ್ರಯೋಗ ಶಾಲೆಗೆ ಕಳುಹಿಸಿ ಪರೀಕ್ಷೆ ನಡೆಸಿದ ನಂತರ ಬಲರಾಮನಿಗೆ ಕ್ಷಯಾ ರೋಗ ಇರುವುದಾಗಿ ವೈದ್ಯಾಧಿಕಾರರಿಗಳು ತಿಳಿಸಿದರು. ನಂತರ ಚಿಕಿತ್ಸೆಯನ್ನು ಮುಂದುವರೆಸಿದ್ದು ಆನೆಯು ಯಾವುದೇ ಆಹಾರ, ನೀರು ಸೇವಿಸದೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ ಮೃತಪಟ್ಟಿದೆ.

Also Read  ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ

ಸೋಮವಾರ ಬೆಳಗ್ಗೆ ಪಶುವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಣಸೂರು ವನ್ಯಜೀವಿ ವಲಯದ ಭೀಮನ ಕಟ್ಟೆ ಆನೆ ಕ್ಯಾಂಪ್​ ಬಳಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಮತ್ತು ಬಲರಾಮನ ಅಂತ್ಯಕ್ರಿಯೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮೈಸೂರು ಅರಮನೆ ವತಿಯಿಂದ ಪುರೋಹಿತರು ಹಾಗೂ ರಾಜ ವಂಶಸ್ಥರಾದಂತಹ ಶೃತಿಕೀರ್ತಿದೇವಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬಲರಾಮ ಆನೆಯನ್ನು ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಅರಣ್ಯ ಪ್ರದೇಶದಲ್ಲಿ 1987ರಲ್ಲಿ ಸೆರೆ ಹಿಡಿಯಲಾಗಿತ್ತು.

error: Content is protected !!
Scroll to Top