ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಖಾಸಗಿ ಬಸ್ ಢಿಕ್ಕಿ !!! ➤ ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ, 08. ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಮುಡಾ ಹಗರಣ: ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಸಿಎಂ ಮೇಲ್ಮನವಿ ಸಲ್ಲಿಕೆ

error: Content is protected !!