ಕೂಳೂರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆಯಲ್ಲಿ ಸಿಕ್ಕಿಹಾಕಿಕೊಂಡ ಖಾಸಗಿ ಬಸ್ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಎದುರಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಅರ್ಧದಲ್ಲಿ ಸಿಲುಕಿಕೊಂಡ ಪರಿಣಾಮ ದೊಡ್ಡ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಕೂಳೂರಿನಲ್ಲಿ ಸೋಮವಾರದಂದು ನಡೆದಿದೆ.

ಸುರತ್ಕಲ್‌ – ಸ್ಟೇಟ್ ಬ್ಯಾಕ್ ಮಧ್ಯೆ ಸಂಚರಿಸುವ ಖಾಸಗಿ ಬಸ್ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವಾಗ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ತಡೆಗೋಡೆ ಮುರಿದು ಬಸ್ಸಿನ ಅರ್ಧ ಭಾಗ ಸೇತುವೆಯಲ್ಲಿ ಸಿಲುಕಿಕೊಂಡ ಕಾರಣ ದೊಡ್ಡ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಪೂರ್ತಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಸ್ವಲ್ಪ ಮುಂದುಗಡೆ ಚಲಿಸುತ್ತಿದ್ದರೆ ಅಪಾರ ಪ್ರಾಣ ಹಾನಿಯಾಗುವ ಸಂಭವವಿತ್ತು. ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬಸ್ಸನ್ನು ತೆರವುಗೊಳಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

Also Read  ಆ. 20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

error: Content is protected !!
Scroll to Top