ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ➤ ಇಂದು(ಮೇ.8)ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.08. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಮೇ.08 ರಿಂದ 12ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 08ರಂದು ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಈ ಹಿನ್ನೆಲೆ ಮೇ.09 ಮತ್ತು 10ರಂದು ಭಾರೀ ಮಳೆಯಾಗಬಹುದು. ಮೇ 10ರಂದು ಮತದಾನಕ್ಕೆ ತೆರಳುವವರಿಗೆ ಮಳೆಯಿಂದ ಸಮಸ್ಯೆ ಉಂಟಾಗಬಹುದು.

ಇನ್ನು, ಇಂದು ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್‌, ಕೊಪ್ಪಳ ಜಿಲ್ಲೆಯ ಕೆಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

Also Read  ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ

 

 

error: Content is protected !!
Scroll to Top