(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.08 ಚಂಡಮಾರುತದ ಚಲನೆಯಿಂದಾಗಿ ಬಂಗಾಳಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಕ್ಷುಬ್ಧತೆ ಉಂಟಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಸಮುದ್ರದಲ್ಲಿ ಚಂಡಮಾರುತ ಚಲನೆಯಿಂದಾಗಿ, ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದೆ.ಪಶ್ಚಿಮ ಬಂಗಾಳದಲ್ಲಿ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ಕಡೆ ತೆರಳದಂತೆ ಸೂಚಿಸಲಾಗಿದೆ.