ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ.! ➤ರಾಜ್ಯದಲ್ಲಿ BJP ಅಲೆ ಸೃಷ್ಟಿಸಿದ ಮೋದಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು ಒಂದು ವಾರಗಳ ಕಾಲ ಕರ್ನಾಟಕದಲ್ಲಿ ಗಟ್ಟಿಯಾಗಿ ನಿಂತು ಬಿಜೆಪಿ ಪರ ಅಲೆ ಮೂಡಿಸುವಲ್ಲಿ ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಕಾರ್ಯ ಭಾನುವಾರ ಮುಕ್ತಾಯಗೊಂಡಿದೆ.ಬೆಂಗಳೂರಿನಲ್ಲಿ ನಡೆದ ಐತಿಹಾಸಿಕ ರೋಡ್‌ ಶೋ ಸೇರಿದಂತೆ ಒಟ್ಟು 27 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾಗಿದ್ದಾರೆ.ಒಟ್ಟು 21ಸಭೆ ಹಾಗೂ 6 ರೋಡ್‌ ಶೋದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ.

ಬೀದರ್‌ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಮೊದಲ ಕಾರ್ಯಕ್ರಮ ಆರಂಭವಾಗುವುದರೊಂದಿಗೆ ಕರ್ನಾಟಕದಲ್ಲಿ ಮೋದಿ ಹವಾ ಪ್ರಾರಂಭಗೊಂಡಿತು. ಇದರ ಜತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಬಿಜೆಪಿ ಪರ ಭರ್ಜರಿ ಪ್ರಚಾರವನ್ನೇ ನಡೆಸಿದ್ದಾರೆ.

Also Read  ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ

 

 

 

error: Content is protected !!
Scroll to Top