ಬಾಲಕಿ ಮೇಲೆ ಅತ್ಯಾಚಾರ ಯತ್ನ ➤ ಆರೋಪಿಗಳನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮೇ.08. ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳಿಬ್ಬರನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ.

ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆರಾಮೌ ಉತ್ತರ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ 16 ವರ್ಷದ ಬಾಲಕಿಯ ಮೇಲೆ 22 ರಿಂದ 25 ವರ್ಷ ವಯಸ್ಸಿನ ಇಬ್ಬರು ಯುವಕರು ಅತ್ಯಾಚಾರ ಯತ್ನ ನಡೆಸಿದ್ದಾರೆ. ಸಂತ್ರಸ್ತೆಯ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.

 

Scroll to Top