ಒಳ ಚರಂಡಿ ಸ್ವಚ್ಛಗೊಳಿಸುವಾಗ ದುರಂತ ➤ ವಿಷಾನಿಲದಿಂದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ರಾಜಸ್ಥಾನ, ಮೇ.08. ಮದುವೆ ಹಾಲ್ವೊಂದರ ಒಳಚರಂಡಿ ಚೇಂಬರ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಯುವಕರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದೆ. ಸ್ವಚ್ಛ ಮಾಡುತ್ತಿದ್ದ ವೇಳೆ ವಿಷಾನಿಲದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದೇ ವೇಳೆ ಯುವಕನೊಬ್ಬ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಮೇರೆಗೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಂಗಾರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮೂವರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

Scroll to Top