ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – ಇಬ್ಬರು ನಕ್ಸಲೀಯರ ಹತ್ಯೆ

(ನ್ಯೂಸ್ ಕಡಬ)newskadaba.com ಛತ್ತೀಸ್‌ಗಢ, ಮೇ.08. ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ ನಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಸುಕ್ಮಾ ಪೊಲೀಸರು, ‘ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದರು.

Also Read  ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ

 

error: Content is protected !!
Scroll to Top