(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ರಾಜ್ಯ ವಿಧಾನಸಭಾ ಚುನಾವಣೆ ಇನ್ನು ಕೇವಲ 3 ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೊರತೆ ಕೂಡ ಎದುರಾಗಿದೆ.ಚುನಾವಣೆ ಹಿನ್ನೆಲೆಯಲ್ಲಿ ಮದ್ಯದ ವಹಿವಾಟು ಗಣನೀಯವಾಗಿ ವೃದ್ಧಿಸಿದ್ದು, ನೀತಿ ಸಂಹಿತೆ ಜಾರಿ ಇರುವ ಕಾರಣ ಬೇಡಿಕೆಗೆ ತಕ್ಕಂತೆ ಎಣ್ಣೆ ಪೂರೈಕೆಯಾಗುತ್ತಿಲ್ಲ.
ಮೇ. 10 ರಂದು ಮತದಾನ ನಡೆಯಲಿದ್ದು, ಮತದಾನ ನಡೆಯುವ 48 ಗಂಟಗೂ ಮೊದಲೇ ಮದ್ಯದಂಗಡಿಗಳು ಬಂದ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದ್ದು, ಅಕ್ರಮ ದಾಸ್ತಾನಗಳು ಹೆಚ್ಚಾಗತೊಡಗಿದೆ.
ನಗರಕ್ಕಿಂತಲೂ ಗ್ರಾಮಗಳಲ್ಲಿ ಅಕ್ರಮ ಮದ್ಯ ದಾಸ್ತಾನು ಪ್ರಮಾಣ ಹೆಚ್ಚಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.ಚುನಾವಣೆ ವೇಳೆ ಮದ್ಯಕ್ಕೆ ಬೇಡಿಕೆ ಹೆಚ್ಚಾಗಲಿದ್ದು, ಈ ಸಂದರ್ಭದಲ್ಲಿ ಅಕ್ರಮ ದಾಸ್ತಾನುಗಳು ಮೂಲಕ ಮದ್ಯವನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಹಲವರು ಉದ್ದೇಶಿಸಿದ್ದಾರೆ.