ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com.ಅಮೆರಿಕ, ಮೇ.8.  ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಾಪಿಂಗ್​ ಮಾಲ್​ಗೆ ತೆರಳಿದ್ದಾಗ ಕಪ್ಪು ಕಾರಿನಲ್ಲಿ ಬಂದ ದುಷ್ಕರ್ಮಿ ಅಂಗಡಿಗಳ ಹೊರಗಿನಿಂದ ಗುಂಡಿನ ದಾಳಿ ನಡೆಸಿದ್ದ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ದಾಳಿಕೋರನ ಮೇಲೆ ಪ್ರತಿದಾಳಿ ನಡೆಸಿದ್ದರು.

Also Read  ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ - ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ

ದಾಳಿಕೋರ ಗುಂಡು ಹಾರಿಸಿದ ನಂತರ ಸ್ವತಃ ಗುಂಡು ಹಾರಿಸಿಕೊಂಡಿದ್ದಾನೆಯೇ ಅಥವಾ ಪೊಲೀಸರ ಪ್ರತೀಕಾರದ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾನೆಯೇ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಆರೋಪಿ ಸಾವನ್ನಪ್ಪಿದ ಬಳಿಕ ಸ್ಥಳಕ್ಕಾಗಮಿಸಿದ ಆಯಂಬುಲೆನ್ಸ್​ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಗಾಯಾಳುಗಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

error: Content is protected !!
Scroll to Top