(ನ್ಯೂಸ್ ಕಡಬ) newskadaba.com. ಛತ್ತೀಸ್ಗಢ, ಮೇ.8. ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಸುಕ್ಮಾ ಪೊಲೀಸರು, ‘ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದರು.
ಇನ್ನು ಮೇ 1 ರಂದು ಸುಕ್ಮಾ ಜಿಲ್ಲೆಯ ಇಟ್ಟಪಾರಾ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಎರಡು ಟಿಪ್ಪರ್ ಟ್ರಕ್ಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದರು ಎಂದು ತಿಳಿದು ಬಂದಿದೆ.