ಮನೀಷ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ದೆಹಲಿ, ಮೇ.08. ದೆಹಲಿಯ ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಸ್‌ ಸಿಸೋಡಿಯಾಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮೇ 23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.


ಆರೋಪಿಯಾಗಿರುವ ಮನೀಶ್‌ ಸಿಸೋಡಿಯಾ ದೆಹಲಿಯಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಮಯದಲ್ಲಿ ಈ ಹಗರಣ ನಡೆದಿತ್ತು ಎಂದು ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಇಡಿ ಸಲ್ಲಿಸಿದ ಅರ್ಜಿಯ ಬಳಿಕ ಕೋರ್ಟ್‌ ಈ ತೀರ್ಪು ನೀಡಿದೆ.

error: Content is protected !!
Scroll to Top