ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ.!➤ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕೃಷಿ ವಿಜ್ಞಾನ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮೇ 20 ರಿಂದ 22 ರವರೆಗೆ ನಡೆಯಲಿದೆ.ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿದ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು. ಗಡಿನಾಡು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ ಮೇ 22 ರಂದು ಕನ್ನಡ ಪರೀಕ್ಷೆ ನಡೆಯಲಿದೆ. ಪ್ರಾಧಿಕಾರದ ವೆಬ್ಸೈಟ್ https://kea.kar.nic.in ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Also Read  ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ

 

 

 

 

error: Content is protected !!
Scroll to Top