ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಇಬ್ಬರು ಕಾರ್ಯಕರ್ತರು ಜಿಲ್ಲಾಧಿಕಾರಿ ವಶಕ್ಕೆ.!

(ನ್ಯೂಸ್ ಕಡಬ)Newskadaba.comಲಬುರಗಿ,ಮೇ.09 ದಕ್ಷಿಣ ‌ಮತಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು‌ ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ‌ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ‌ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ.

ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಕಡೆಯವರು ಎನ್ನಲಾದ ಇಬ್ಬರು ಬೀದಿ ದೀಪ ಬಂದ್ ಮಾಡಿ ಹಣ ಹಂಚಲು‌ ಮುಂದಾಗಿದ್ದರು ಎಂದು ಕಾಂಗ್ರೆಸ್ ‌ಕಾರ್ಯಕರ್ತರು ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದರು. ಪೊಲೀಸರ‌ ಗಮನಕ್ಕೂ ತರದೇ ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿದರು.

ಇದರಿಂದ ಕಕ್ಕಾಬಿಕ್ಕಿಯಾದ ಇಬ್ಬರು ಕಾರನ್ನು ಗಂಟೆಗೆ 100 ಕಿ.ಮೀ. ವೇಗದಲ್ಲಿ ಚಲಾಯಿಸಿಕೊಂಡು ಪರಾರಿಯಾಗುತ್ತಿದ್ದರು. ಅವರ ಬೆನ್ನಟ್ಟಿದ ಜಿಲ್ಲಾಧಿಕಾರಿ ‌ಕೇಂದ್ರ ಬಸ್ ನಿಲ್ದಾಣ ಸಮೀಪದ ವಿದ್ಯಾನಗರದ ಬಳಿ ಕಾರನ್ನು ತಡೆದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Also Read  ಸ್ಕ್ರ್ಯಾಪ್ ಗೆ ಹಾಕುವ ವಾಹನಗಳ ದಂಡದ ವಿನಾಯಿತಿ 2 ವರ್ಷ ವಿಸ್ತರಣೆ- ಸರಕಾರ ಆದೇಶ

 

error: Content is protected !!
Scroll to Top