ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಮತದಾರರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನುಕೂಲಕ್ಕಾಗಿ ರಾಜ್ಯದ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ.2023 ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಚುನಾವಣಾ ಆಯೋಗ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಮೇ 10 ರಂದು ರಾಜ್ಯಾದ್ಯಂತ ನಡೆಯುವ ಚುನಾವಣೆ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ.

ಇನ್ನೂ ಈ ಬಾರೀ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಹಲವು ಜಿಲ್ಲೆಗಳಿಂದ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳಲು ಬಂದ ಜನರು ತಮ್ಮ ಊರುಗಳಿಗೆ ತೆರಳಿ ಮತದಾನ ಮಾಡಲು ಸಜ್ಜಾಗಿದ್ದಾರೆ. ಹೀಗಾಗಿ ಮತದಾನ ಮಾಡುವ ಪ್ರಯಾಣಿಕರಿಗಾಗಿಯೇ ಮೇ 9 ಹಾಗೂ 10 ರಂದು ಜನ್‌ ಶತಾಬ್ದಿ ಸೇರಿ ಪ್ರಮುಖ ರೈಲುಗಳಲ್ಲಿ ಹೆಚ್ಚುವರಿ ಬೋಗಿಗಳನ್ನ ಅಳವಡಿಸಲಾಗಿದೆ.

Also Read  ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್...!

 

 

error: Content is protected !!
Scroll to Top