2023 ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

 (ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.9. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮೇ 20 ಮತ್ತು 21ರಂದು ಈ ಸಿಇಟಿ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ- 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್‌ಸೈಟ್‌ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಈ ಪರೀಕ್ಷೆ ನಡೆಯಲಿದೆ.

error: Content is protected !!
Scroll to Top