ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶಕ್ಕೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕೆಎಸ್ಆರ್ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಂದ ರೂ.36,30,000 ಮೌಲ್ಯದ 36 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇಬ್ಬರು ಪ್ರಯಾಣಿಕರಿಂದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಸೆಕ್ಷನ್ 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಲು ರೈಲ್ವೇ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಇದರಂತೆ ರೈಲುಗಳು ಮತ್ತು ಪ್ಲಾಟ್ಫಾರ್ಮ್ಗಳಲ್ಲಿ ಪ್ರತೀನಿತ್ಯ ತೀವ್ರ ತಪಾಸಣೆ ಕೈಗೊಳ್ಳುತ್ತಿದ್ದಾರೆ.

 

 

 

 

 

Scroll to Top