ದೀಪಕ್ ರಾವ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಸೋಮವಾರದಂದು ಬಂಧಿಸಿದ್ದ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಬಂಧಿತ ಆರೋಪಿಗಳನ್ನು ಕಾಟಿಪಳ್ಳ 2 ನೇ ಬ್ಲಾಕ್ ನಿವಾಸಿ ಅಬ್ದುಲ್ ಅಝೀಝ್(42) ಮತ್ತು ಮೂಲತಃ ಕಾಟಿಪಳ್ಳ 2ನೆ ಬ್ಲಾಕ್‌ನ ನಿವಾಸಿ ಪ್ರಸ್ತುತ ಕೃಷ್ಣಾಪುರದಲ್ಲಿ ವಾಸವಾಗಿರುವ ಅಬ್ದುಲ್ ಅಝೀಮ್ (34) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಪಣಂಬೂರು ಪೊಲೀಸ್ ಠಾಣಾ ನಿರೀಕ್ಷಕ ರಫೀಕ್ ಮತ್ತು ಸಿಬ್ಬಂದಿ ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶಾಂತರಾಂ ಕುಂದರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ- ಫ್ರೀಡಂ ಸ್ಕ್ವೇರ್

error: Content is protected !!
Scroll to Top