ಚುನಾವಣಾ ಕರ್ತವ್ಯ ಲೋಪ ಹಿನ್ನಲೆ➤ ಶೃಂಗೇರಿ ತಾಲೂಕು ಪಂಚಾಯತ್ ಇಒ ಅಮಾನತು..!  

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.10  ಕರ್ನಾಟಕ ವಿಧಾನಸಭೆ ಚುನಾವಣೆ -2023ಕ್ಕೆ ಸಂಬಂಧಿಸಿದಂತೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ.

ಮಹಿಳಾ ಸಿಬ್ಬಂದಿ ಮುಂದೆ ಅವಾಚ್ಯ ಮತ್ತು ತೀರಾ ಆಶ್ಲೀಲ ಪದಗಳನ್ನು ಬಳಸಿ ಸಿಬ್ಬಂದಿಗೆ ಮುಜುಗರವಾಗುವಂತೆ ಮನಬಂದಂತೆ ಮಾತನಾಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಕಲಂ 28 (ಎ) ಮತ್ತು 136ರಡಿಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

Also Read  ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

 

 

 

error: Content is protected !!
Scroll to Top