ಮತಗಟ್ಟೆಯಲ್ಲೇ ಕುಸಿದು ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳಗಾವಿ, ಮೇ.10. ಮತ ಚಲಾಯಿಸಲು ಬಂದಿದ್ದ ವೃದ್ಧೆ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸವದತ್ತಿ ತಾಲೂಕಿನ ಯರಝರ್ವಿ ಎಂಬಲ್ಲಿ ನಡೆದಿದೆ.

68 ವರ್ಷದ ಪಾರವ್ವ ಈಶ್ವರ ಸಿದ್ನಾಳ ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಪಾರವ್ವ ಮತದಾನ ಮಾಡಲೆಂದು ಮತಗಟ್ಟೆಗೆ ಬಂದಿದ್ದರು. ಆದರೆ ಅದಕ್ಕೂ ಮುನ್ನವೇ ಬೂತ್ ನ ಅವರಣದಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

error: Content is protected !!
Scroll to Top